ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ. 81.15ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಮಾರ್ಚ್ 1ರಿಂದ ಮಾರ್ಚ್ 22ರ ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶ ಪರೀಕ್ಷಿಸಬಹುದು.
2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ವಿದ್ಯಾರ್ಥಿಗಳು ಮತ್ತು 3.6 ಲಕ್ಷ ವಿದ್ಯಾರ್ಥಿನಿಯರು ಹಾಜರಾಗಿದ್ದರು. ರಾಜ್ಯಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
ಕಳೆದ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದರು. ಕಳೆದ ಬಾರಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರ ಪೈಕಿ ಶೇಕಡಾ 80.25 ರಷ್ಟು ಉತ್ತೀರ್ಣರಾಗಿದ್ದರು. ವಿದ್ಯಾರ್ಥಿಗಳು ಶೇ. 69.05 ರಷ್ಟು ಜನ ಉತ್ತೀರ್ಣರಾಗಿದ್ದರು. ಆದರೆ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿ ಒಟ್ಟಾರೆ ತೇರ್ಗಡೆ ಹೊಂದಿದವರ ಪ್ರಮಾಣ ಶೇ. 74.67 ರಷ್ಟಾಗಿತ್ತು.