ಬಳ್ಳಾರಿ: ದಾಖಲೆ ಇಲ್ಲದ 5.6 ಕೋಟಿ ಹಣ ಹಾಗೂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ನರೇಶ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಈ ಹಿಂದೆಯೂ ಹವಾಲಾ ದಂಧೆ ನಡೆಸಿದ್ದ ಎಂದು ಎಸ್ಪಿ ರಂಚಿತಕುಮಾರ್ ಬಂಡಾರು ತಿಳಿಸಿದ್ದಾರೆ.
ಆರೋಪಿ ಹವಾಲಾ ದಂಧೆ ನಡೆಸುತ್ತಿರುವ ಸಂಶಯದ ಹಿನ್ನೆಲೆಯಲ್ಲಿ ಪೊಲೀಸರು ಆತನ ಮೇಲೆ ಕಣ್ಣಿಟ್ಟಿದ್ದರು. ಸದ್ಯ ಖಚಿತ ಮಾಹಿತಿ ಮೇರೆಗೆ ಏ.7ರಂದು ಬಳ್ಳಾರಿಯ ಕಂಬಳಿ ಬಜಾರ್ನ ನರೇಶ್ ಮನೆ ಮೇಲೆ ಏಕಕಾಲದಲ್ಲಿ ಐಟಿ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭದಲ್ಲಿ ಆತನ ಮನೆಯಲ್ಲಿದ್ದ 5.6 ಕೋಟಿ ರೂ. ಹಣ, 3 ಕೆಜಿ ಚಿನ್ನ, 68 ಕೆಜಿ ಬೆಳ್ಳಿ, 103 ಕೆಜಿ ಬೆಳ್ಳಿ ಆಭರಣ ಜಪ್ತಿ ವಶಕ್ಕೆ ಪಡೆಯಲಾಗಿದೆ.