ಮುಂಬೈ ಹಾಗೂ ಆರ್ ಸಿಬಿ ಮಧ್ಯೆ ನಡೆಯುತ್ತಿರುವ ಪಂದ್ಯದ ವೇಳೆ ಮೂವರು ಆಟಗಾರರು ಮಿಂಚು ಹರಿಸಿದ್ದಾರೆ.
ಪರಿಣಾಮ ಆರ್ ಸಿಬಿ ತಂಡ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಆರ್ ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್, ರಜತ್ ಪಾಟಿದಾರ್ ಹಾಗೂ ದಿನೇಶ್ ಕಾರ್ತಿಕ್ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ. ನಾಯಕ ಫಾಫ್ ಡುಪ್ಲೆಸಿಸ್ ಕೇವಲ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 61 ರನ್ ಗಳಿಸಿದ್ದಾರೆ. 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಡುಪ್ಲೆಸಿಸ್ ಜೊತೆ ಸೇರಿ ರಜತ್ ಪಾಟಿದರ್ ಉತ್ತಮ ಆಟ ಪ್ರದರ್ಶಿಸಿದರು.
ಅವರು ಕೂಡ ಅರ್ಧಶತಕ ಸಿಡಿಸಿ ಮಿಂಚಿದರು. ಪಾಟಿದರ್ ಕೇವಲ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಗಳಿಸಿದರು. ಕೊನೆಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಆಪತ್ಭಾಂಧವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 53 ರನ್ ಗಳಿಸಿದ್ದಾರೆ. ಮುಂಬೈ ಪರ ಜಸ್ಪ್ರೀತ್ ಬುಮ್ರಾ ಕೇವಲ 21 ರನ್ ನೀಡಿ ಪ್ರಮುಖ 5 ವಿಕೆಟ್ ಗಳಿಸಿದರು.