ಬೆಂಗಳೂರು: ಡಿಕೆ ಬ್ರದರ್ಸ್ ಆಪ್ತನ ಮನೆ ಮೇಲೆ ಐಟಿ ದಾಳಿ ನಡೆದಿದೆ.
ಆಪ್ತ ಕನಕಪುರ ಕೆಂಪರಾಜು ಮನೆ ಮೇಲೆಯೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಕನಕಪುರ ರಸ್ತೆಯ ವಾಜರ ಹಳ್ಳಿಯಲ್ಲಿರುವ ಕೆಂಪರಾಜು ನಿವಾಸದ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಎರಡು ಇನೋವಾ ಕಾರಿನಲ್ಲಿ ಬಂದಿದ್ದ ಅಧಿಕಾರಿಗಳು ಕೆಂಪರಾಜು ಮನೆಯ ಮೇಲೆ ದಾಳಿ ಮಾಡಿದ್ದಾರೆ. ಡಿಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆಂಪರಾಜು ಗ್ರಾನೈಟ್ ಹಾಗೂ ಕ್ರಶರ್ ಸೇರದಂತೆ ಹಲವು ಉದ್ಯಮಗಳನ್ನು ನಡೆಸುತ್ತಿದ್ದರು.