ನಟ ದಿಗಂತ್ ಉತ್ತರಕಾಂಡದಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.
ಗಾಗಲೇ ಪೋಸ್ಟರ್ ನಲ್ಲಿನ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ. ಈ ಚಿತ್ರದಲ್ಲಿ ಡಾಲಿ ಧನಂಜಯ್ ಕೂಡ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಶಿವರಾಜ್ ಕುಮಾರ್ ಕಾಂಬಿನೇಷನ್ ಚಿತ್ರದಲ್ಲಿ ಚೈತ್ರಾ ಆಚಾರ್ಯ್ ಇದ್ದಾರೆ.
ಉತ್ತರಕಾಂಡದ ಮುಹೂರ್ತ 2022ರಲ್ಲಿ ಆಗಿದೆ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಚಿತ್ರವು ಉತ್ತರ ಕರ್ನಾಟಕದ ಆಡುಭಾಷೆ ಹೊಂದಿದೆ. ಹೀಗಾಗಿ ಜನರ ನಿರೀಕ್ಷೆ ಕೂಡ ಹೆಚ್ಚಾಗಿದೆ. ಏ.15 ರಿಂದ ಚಿತ್ರೀಕರಣ ಆರಂಭಗೊಂಡಿದ್ದು, ಚಿತ್ರತಂಡ ಉತ್ಸುಕದಿಂದ ಭಾಗಿಯಾಗಿದೆ.
ಇದು “ಆಕ್ಷನ್ ಡ್ರಾಮಾ” ಚಿತ್ರವಾಗಿದ್ದು, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.