ಧಾರವಾಡ: ಧಾರವಾಡ ಲೋಕಸಕ್ಷಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ಕಣದಿಂದ ಹಿಂದೆ ಸರಿದಿದ್ದಾರೆ.
ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆದಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್ ಪಾಟೀಲ್ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ಹಿಂಪಡೆದಿದ್ದಾರೆ.
ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸಮರ ಸಾರಿದ್ದು, ಅಭ್ಯರ್ಥಿಯನ್ನು ಬದಲಿಸುವಂತೆ ಪಟ್ಟು ಹಿಡಿದಿದ್ದರು. ಆದರೆ, ಬಿಜೆಪಿ ಇದಕ್ಕೆ ಒಪ್ಪಿರಲಿಲ್ಲ. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ವಿರುದ್ಧ ಕಣಕ್ಕೆ ಇಳಿದಿದ್ದರು. ಸ್ವಾಮೀಜಿ ಸ್ಪರ್ಧೆಗೆ ವೀರಶೈವ ಮಹಾಸಭಾ ಬೆಂಬಲ ವ್ಯಕ್ತಪಡಿಸಿತ್ತು.
ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಹೇಳಿದ್ದರು. ಅವರ ಆಡಳಿತ ವಿನಾಶಕಾರಿಯಾಗಿದೆ. ಮತ್ತು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯಕ್ಕೆ ಮತ್ತು ಲಿಂಗಾಯತ ಸಮುದಾಯದ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಅನ್ಯಾಯುತವಾಗಿ ನಡೆಸಿಕೊಳ್ಳಲಾಗಿದೆ ಎಂದು ಸ್ವಾಮೀಜಿ ಆರೋಪಿಸಿದ್ದರು.
ಲಿಂಗಾಯತರಿಗೆ ಅನ್ಯಾಯ ಮಾಡಲಾಗಿದೆ. ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿಸಲಾಗಿತ್ತು. ಯಡಿಯೂರಪ್ಪರನ್ನು ಸಿಎಂ ಹುದ್ದೆಯಿಂದ ಅರ್ಧಕ್ಕೆ ಕೆಳಗೆ ಇಳಿಸಲಾಗಿತ್ತು. ಈ ಎಲ್ಲ ಕಾರಣಗಳಿಂದ ಶಿರಹಟ್ಟಿಯ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಕಾಂಗ್ರೆಸ್ ನ ನಾಯಕರು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಗೆ ಬೆಂಬಿಲಿಸುವಂತೆ ಮನವಿ ಮಾಡಿದ್ದರು. ಇತ್ತೀಚೆಗೆ ಡಿಕೆಶಿ ಹಾಗೂ ಸಿಎಂ ಸಿದ್ದರಾಮಯ್ಯ ಕೂಡ ಮೊದಲೇ ಗೊತ್ತಿದ್ದರೆ ನಿಮಗೆ ಟಿಕೆಟ್ ನೀಡಲಾಗುತ್ತಿತ್ತು.
ಈಗ ವಿನೋದ್ ಅಸೂಟಿ ಅವರಿಗೆ ಟಿಕೆಟ್ ನೀಡಿದ್ದೇವೆ. ಕಾಂಗ್ರೆಸ್ ಹಾಗೂ ನಿಮ್ಮ ನಡುವೆ ಮತ ವಿಭಜನೆಯಾದರೆ ಜೋಶಿ ಗೆಲುವು ಸುಲಭವಾಗಲಿದೆ. ಹೀಗಾಗಿ ಇಬ್ಬರೂ ಸೇರಿ ಹೋರಾಟ ಮಾಡಿ ಎಂದು ಮನವಿ ಮಾಡಿದ್ದರು. ಇದರ ಮಧ್ಯೆ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆದಿದ್ದಾರೆ. ಲಿಂಗಾಯತ ಮತಗಳು ಒಂದಾಗುವ ಮುನ್ಸೂಚನೆ ಇದೆ. ಹೀಗಾಗಿ ಯಾರು ಗೆಲ್ಲುತ್ತಾರೆ ಎಂಬುವುದನ್ನು ಕಾಯ್ದು ನೋಡಬೇಕಿದೆ.