ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಂಗಳೂರಿನ ನಾಲ್ಕು ಕ್ಷೇತ್ರಗಳು ಸೇರಿದಂತೆ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಮತದಾರರು ಖುಷಿಯಿಂದಲೇ ತೆರಳಿ ಹಕ್ಕು ಚಲಾಯಿಸುತ್ತಿದ್ದಾರೆ. ಸಿನಿ ತಾರೆಯರು ಕೂಡ ಮತದಾನ ಮಾಡುತ್ತಿದ್ದಾರೆ.
ನಟ, ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಪತ್ನಿಯೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಪತ್ನಿ ಶಿಲ್ಪಾ ಗಣೇಶ್ ರೊಂದಿಗೆ ತೆರಳಿ ಹಕ್ಕು ಚಲಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಗಣೇಶ್, ನಾನು ನನ್ನ ಹಕ್ಕನ್ನು ಚಲಾಯಿಸಿದ್ದೇನೆ. ಮತ ಹಾಕುವುದು ಪ್ರತಿಯೊಬ್ಬರ ಕರ್ತವ್ಯ.
ನಿಮಗೆ ಯಾರು ಒಳ್ಳೆಯವರು ಅನಿಸುತ್ತಾರೆಯೋ ಅವರಿಗೆ ಮತ ಹಾಕಿ. ಆದರೆ, ಪ್ರತಿಯೊಬ್ಬರೂ ಮತದಾನ ಮಾಡಿ. ಯಾವುದಾದರೂ ಕೆಲಸ ಆಗಿಲ್ಲ ಎಂದು ಕೇಳಬೇಕು ಎಂದರೆ ವೋಟ್ ಹಾಕಬೇಕು. ವೋಟ್ ಹಾಕಿ ಕೇಳಿದರೆ ಅದರ ಬೆಲೆ ಜಾಸ್ತಿ ಇರುತ್ತದೆ ಎಂದು ಹೇಳಿದ್ದಾರೆ.