ಹಾಸನ: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕುಟುಂಬ ಸಮೇತರಾಗಿ ಮತ ಚಲಾಯಿಸಿದ್ದಾರೆ.
ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಕುಟುಂಬಸ್ಥರ ಸಮೇತರಾಗಿ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ.
ಮತದಾನಕ್ಕೂ ಮುನ್ನ ಹರದನಹಳ್ಳಿ ಗ್ರಾಮದಲ್ಲಿರುವ ದೇವೇಶ್ವರ ದೇವಾಲಯಕ್ಕೆ ಸಹೋದರ ಸೂರಜ್ ರೇವಣ್ಣ ಜೊತೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಂದೆ-ತಾಯಿ, ಸಹೋದರನೊಂದಿಗೆ ಆಗಮಿಸಿ ಮತದಾನ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೆಡಿಎಸ್ (JDS) ಪರ ಉತ್ತಮ ವಾತಾವರಣವಿದೆ. ಜೆಡಿಎಸ್ ಗೆದ್ದೇ ಗೆಲ್ಲುತ್ತದೆ. ಈ ಕುರಿತು ಯಾವುದೇ ಸಂಶಯವಿಲ್ಲ. ನೂರಕ್ಕೆ ನೂರು ಜನರ ಮೇಲೆ ವಿಶ್ವಾಸ ಇದೆ. ಮನೆ ದೇವರು ದೇವೇಶ್ವರನಿಗೆ ಪೂಜೆ ಸಲ್ಲಿಸಿದ್ದೇನೆ. ಬಿಜೆಪಿ ಕಾರ್ಯಕರ್ತರು, ನಮ್ಮ ಮುಖಂಡರು ಒಟ್ಟಾಗಿ ಕೆಲಸ ಮಾಡಿದ್ದಾರೆ. ಮೊದಲ ಹಂತದ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿಯೂ ಮೈತ್ರಿ ಪಕ್ಷ ಗೆಲ್ಲಲ್ಲಿದೆ ಎಂದು ಹೇಳಿದ್ದಾರೆ.