ಮೇ 5ರಂದು ಚಂದ್ರನು ಮೀನ ರಾಶಿಯಲ್ಲಿ ಸಾಗಲಿದ್ದಾನೆ. ಮಂಗಳ, ರಾಹು ಮತ್ತು ಬುಧ ಗ್ರಹಗಳು ಸಂಚಾರ ನಡೆಸಲಿದ್ದು, ಚತುರ್ಗ್ರಾಹಿ ಯೋಗ ರೂಪುಗೊಳ್ಳುತ್ತಿದೆ. ಹೀಗಾಗಿ ಯಾವ ರಾಶಿಯವರ ಫಲ ಹೇಗಿದೆ?
ಮೇಷ ರಾಶಿ
ಕಚೇರಿಯಲ್ಲಿ ಹೊಸ ಸವಾಲಿನ ಕೆಲಸಗಳನ್ನು ನಿರ್ವಹಿಸಲು ಸಿದ್ಧರಾಗಿರಿ. ಇಂದು ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ಆಸ್ತಿಗೆ ಸಂಬಂಧಿಸಿದ ನಿರ್ಧಾರಗಳಿಗೆ ಇಂದು ಉತ್ತಮ ದಿನವಾಗಿದೆ. ಕೆಲವರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವರು.
ವೃಷಭ ರಾಶಿ
ಕಚೇರಿಯಲ್ಲಿ ಬಾಸ್ ನಿಮ್ಮ ಕೆಲಸವನ್ನು ಹೊಗಳುತ್ತಾರೆ. ಸಂಬಂಧಗಳು ಸುಧಾರಿಸುತ್ತವೆ. ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ಕೆಲವರು ಕುಟುಂಬದೊಂದಿಗೆ ಪ್ರವಾಸವನ್ನು ಯೋಜಿಸಬಹುದು.
ಮಿಥುನ ರಾಶಿ
ನಿಮ್ಮ ಕೆಲಸದಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗಬಹುದು. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳನ್ನು ಆಯೋಜಿಸಬಹುದು. ಹಣದ ಒಳಹರಿವು ಹೆಚ್ಚಾಗುತ್ತದೆ, ಅಷ್ಟೇ ಖರ್ಚುಗಳು ಸಹ ಇರುತ್ತದೆ. ಭರವಸೆ ಮತ್ತು ಹತಾಶೆಯ ಭಾವನೆ ಇರಬಹುದು.
ಕಟಕ ರಾಶಿ
ಶೈಕ್ಷಣಿಕ ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ.ನಿಮಗೆ ಇಂದು ಸಹೋದರರಿಂದ ಬೆಂಬಲ ಸಿಗಲಿದೆ.ನಿಮಗೆ ಹೊಸ ಕೆಲಸವನ್ನು ಪ್ರಾರಂಭಿಸಲು ಶುಭ ದಿನವಾಗಿದೆ.
ಸಿಂಹ ರಾಶಿ
ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಸಂಬಂಧಗಳಲ್ಲಿ ಹೊಸ ರೋಚಕ ತಿರುವುಗಳಿರುತ್ತವೆ. ದಾಂಪತ್ಯ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ನೀವು ಕೆಲಸದ ಹೆಚ್ಚುವರಿ ಜವಾಬ್ದಾರಿಗಳನ್ನು ಪಡೆಯುತ್ತೀರಿ.
ಕನ್ಯಾ ರಾಶಿ
ಕೆಲಸದ ನಿಮಿತ್ತ ಪ್ರಯಾಣ ಮಾಡುವ ಅವಕಾಶವಿರುತ್ತದೆ. ಸಾಂಸಾರಿಕ ಸೌಕರ್ಯ ಮತ್ತು ಸಂಪತ್ತು ವೃದ್ಧಿಯಾಗಲಿದೆ. ಉದ್ಯೋಗ ಬದಲಾವಣೆಯ ಸೂಚನೆಗಳಿವೆ. ನಿಮ್ಮ ಸಂಗಾತಿಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು, ಅತಿಯಾದ ಕೋಪವನ್ನು ತಪ್ಪಿಸಿ.
ತುಲಾ ರಾಶಿ
ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಲಾಭವಿದೆ, ಆದರೆ ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ತಾಳ್ಮೆಯಿಂದಿರುವುದು ಮುಖ್ಯವಾಗುತ್ತದೆ. ನಿಮ್ಮ ಸ್ನೇಹಿತರ ಸಹಾಯದಿಂದ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ.
ವೃಶ್ಚಿಕ ರಾಶಿ
ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ವೆಚ್ಚಗಳನ್ನು ನಿಯಂತ್ರಿಸಿ. ಪೋಷಕರ ಸಹಕಾರ ಸಿಗಲಿದೆ. ಮನೆಯಲ್ಲಿ ಶುಭ ಕಾರ್ಯಗಳನ್ನು ನಡೆಯಬಹುದು. ವ್ಯಾಪಾರದಲ್ಲಿ ವಿಸ್ತರಣೆಗೆ ಅವಕಾಶವಿರುತ್ತದೆ.
ಧನು ರಾಶಿ
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಮಾತಿನಲ್ಲಿ ಕಠೋರತೆಯ ಪರಿಣಾಮವಿರುತ್ತದೆ. ನೀವು ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸುವಿರಿ. ಸ್ವಭಾವದಲ್ಲಿ ಕಿರಿಕಿರಿ ಇರುತ್ತದೆ. ಸ್ವಯಂ ನಿಯಂತ್ರಣದಲ್ಲಿರಿ ಮತ್ತು ಅತಿಯಾದ ಕೋಪವನ್ನು ತಪ್ಪಿಸಿ. ಕಚೇರಿಯಲ್ಲಿ ಅನಗತ್ಯ ವಾದ ವಿವಾದಗಳಿಂದ ದೂರವಿರಿ.
ಮಕರ ರಾಶಿ
ಕೌಟುಂಬಿಕ ಸಮಸ್ಯೆಗಳಿಂದಾಗಿ ಮನಸ್ಸು ಸ್ವಲ್ಪ ಚಿಂತೆಯಲ್ಲಿ ಉಳಿಯಬಹುದು. ಇಂದು ಪಿತ್ರಾರ್ಜಿತ ಆಸ್ತಿಯಿಂದ ಆರ್ಥಿಕ ಲಾಭವಾಗಲಿದೆ. ನೀವು ಪೋಷಕರ ಬೆಂಬಲವನ್ನು ಪಡೆಯುತ್ತೀರಿ. ಭೂಮಿ ಅಥವಾ ವಾಹನವನ್ನು ಖರೀದಿಸುವ ಅವಕಾಶವಿರುತ್ತದೆ.
ಕುಂಭ ರಾಶಿ
ಕೆಲಸದ ಸ್ಥಳದಲ್ಲಿ ನೀವು ಉನ್ನತ ಅಧಿಕಾರಿಗಳಿಂದ ಬೆಂಬಲವನ್ನು ಪಡೆಯಬಹುದು. ಉದ್ಯೋಗದಲ್ಲಿ ಪ್ರಗತಿಗೆ ಸುವರ್ಣಾವಕಾಶಗಳು ದೊರೆಯಲಿವೆ. ಇಂದು ನಿಮ್ಮ ಭಾವನೆಗಳು ಏರುಪೇರಾಗಬಹುದು. ಭಾವನಾತ್ಮಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ.
ಮೀನ ರಾಶಿ
ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಅತಿಯಾದ ಕೋಪವನ್ನು ತಪ್ಪಿಸಿ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗ ಮತ್ತು ವ್ಯಾಪಾರಕ್ಕೆ ವಾತಾವರಣವು ಅನುಕೂಲಕರವಾಗಿರುತ್ತದೆ.