ರಾಂಚಿ: ನಾಲ್ವರು ಅಪ್ರಾಪ್ತರು ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಹರಿಬಿಟ್ಟಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಅಪ್ರಾಪ್ತರು ವಶಕ್ಕೆ ಪಡೆದಿದ್ದಾರೆ. ಜಾರ್ಖಂಡ್ (Jharkhand) ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಏಪ್ರಿಲ್ 21 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 19 ವರ್ಷದ ಯುವತಿಯ ಮೇಲೆ ಅಪ್ರಾಪ್ತರು ಅತ್ಯಾಚಾರ ನಡೆಸಿದ್ದಾರೆ. ನಂತರ ವಿಡಿಯೋ ಹರಿಬಿಟ್ಟಿದ್ದಾರೆ.
ಅಲ್ಲದೇ, ಈ ವಿಚಾರ ಯಾರಿಗಾದರೂ ಹೇಳಿದರೆ ವಿಡಿಯೋ ಬಹಿರಂಗ ಪಡಿಸುವುದಾಗಿ ಯುವತಿಗೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇ 3ರಂದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಆಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.