ಬೆಂಗಳೂರು: ಜಿಲ್ಲೆಯಿಂದ ಆಚೆ ಇರುವ ಶಾಸಕ ವಿನಯ್ ಕುಲಕರ್ಣಿಗೆ(Vinay Kulkarni) ಮತದಾನ ಮಾಡಲು ಕೋರ್ಟ್ ನಿಂದ ಅನುಮತಿ ಸಿಕ್ಕಿದೆ.
ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದೆ. ಮತದಾನ ಮಾಡಿದ ಕೂಡಲೇ ಧಾರವಾಡ ತೊರೆಯುವಂತೆ ಕೂಡ ಸೂಚಿಸಲಾಗಿದೆ. ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಸಿಲುಕಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಿಸಲು ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು. ಹೀಗಾಗಿ ಅವರು ಮತದಾನ ಮಾಡಲು ಅವಕಾಶ ನೀಡುವಂತೆ ಕೋರಿದ್ದರು.
ಈ ಹಿನ್ನೆಲೆಯಲ್ಲಿ ಕೋರ್ಟ್ ಮತದಾನ ಮಾಡಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಧಾರವಾಡ ನಗರದ ಶಾರದಾ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 75 ಕ್ಕೆ ವಿನಯ್ ಕುಲಕರ್ಣಿ ಆಗಮಿಸಲಿದ್ದಾರೆ.