ಶಿವಮೊಗ್ಗ,: ಜಿಲ್ಲೆಯಲ್ಲಿ ಮತ್ತೆ ಮಾರಕಾಸ್ತ್ರಗಳು ಸದ್ದು ಮಾಡಿದ್ದು, ಇಬ್ಬರು ಯುವಕರು ಕೊಲೆಯಾಗಿದ್ದಾರೆ.
ಎರಡು ಗುಂಪುಗಳ ಮಧ್ಯೆ ಗ್ಯಾಂಗ್ ವಾರ್ ನಡೆದಿದ್ದು, ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗೌಸ್ (30), ಶೋಹೆಬ್(30) ಕೊಲೆಯಾದ ಯುವಕರು. ನಗರದ (Shivamogga) ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ಕೂಡ ರೌಡಿಶೀಟರ್ ಗಳು ಎನ್ನಲಾಗಿದೆ. ಮೃತ ರೌಡಿ ಶೀಟರಗಳು, ಮತ್ತೋರ್ವ ರೌಡಿಶೀಟರ್ ಆದ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದರು. ಈ ವೇಳೆ ಅವರನ್ನೇ ಹೆಣವಾಗಿ ಕೆಡವಿದ್ದಾರೆ. ಯಾಸೀನ್ ಖುರೇಷಿ ಕಡೆಯವರು ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ರೌಡಿಶೀಟರ್ ಯಾಸೀನ್ ಖುರೇಷಿಗೆ ಗಾಯವಾಗಿದ್ದು, ಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಮವಿದ್ದು, ಕೆಎಸ್ ಆರ್ ಪಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.