ಮಂಡ್ಯ: ಪ್ರಜ್ವಲ್ ಪ್ರಕರಣದ ತನಿಖೆ ಪ್ರಮಾಣಿಕವಾಗಿ ನಡೆಯಲಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಇಲ್ಲಿಯವರೆಗೂ ನನ್ನ ಸಂಪರ್ಕಕ್ಕೆ ಬಂದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು.ಹೀಗಾಗಿಯೇ ಕುಮಾರಸ್ವಾಮಿ ಅವರು ಈ ಪ್ರಕರಣ ಹೊರ ಬರುತ್ತಿದ್ದಂತೆ ಪ್ರಜ್ವಲ್ ನನ್ನು ಅಮಾನತು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಬೇಕಾದರೆ ಈ ಪ್ರಕರಣವನ್ನು ಸಿಬಿಐಗೆ ವಹಿಸಿ, ತನಿಖೆ ಮಾಡಲಿ. ಪೆನ್‌ಡ್ರೈವ್ ವಿಚಾರವಾಗಿ (Pendrive Case) ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಅದನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.
ತನಿಖೆ ಪಾರದರ್ಶಕವಾಗಿ ತನಿಖೆ ನಡೆಯುತ್ತಿದ್ಯಾ? ಎಂಬ ಪ್ರಶ್ನೆ ಇದೆ. ಈ ಕುರಿತು ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಾದ ಸರ್ಕಾರ ಸಂತ್ರಸ್ತರನ್ನು ಬೀದಿಗೆ ತಂದಿದೆ. ಪೆನ್‌ಡ್ರೈವ್ ಹಂಚಿರೋದು ಯಾರು ಎಂದು ಪತ್ತೆ ಹಚ್ಚಬೇಕು. ಹೆಣ್ಣು ಮಕ್ಕಳನ್ನು ಬ್ಲರ್ ಮಾಡದೇ ವೀಡಿಯೋ ಹರಿ ಬಿಟ್ಟಿದ್ದಾರೆ. ಇದು ಸರಿಯಲ್ಲ. ಮಹಿಳೆಯರ ಗೌರವಕ್ಕೆ ಧಕ್ಕೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.