ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಜನರು ಭಾರತದ ಧ್ವಜ ಹಿಡಿದು ಬೀದಿಗೆ ಇಳಿದು ಹೋರಾಟ ನಡೆಸುತ್ತಿದ್ದಾರೆ.
ವಿದ್ಯುತ್(Electricity) ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮುಷ್ಕರದ ಸಮಯದಲ್ಲಿ, ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ಜನರು ಬೀತಿಗೆ ಇಳಿದು ಹೋರಾಟ ಕೈಗೊಂಡಿದ್ದಾರೆ. ಹೀಗಾಗಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಹೀಗಾಗಿ ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಆಕ್ಷನ್ ಕಮಿಟಿ (ಜೆಕೆಜೆಎಎಸಿ) ಕರೆದಿದ್ದ ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಾಫರಾಬಾದ್‌ನಲ್ಲಿ ಬಂದ್ ಮತ್ತು ಜಾಮ್ ಮುಷ್ಕರದ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಶೆಲ್ ಹಾರಿಸಲಾಗಿದೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮಸೀದಿಗಳ ಮೇಲೆಯೂ ಕಲ್ಲು ತೂರಾಟ ನಡೆಸಿದ್ದಾರೆ. ಪಿಒಕೆಯ ಸಂಹಾನಿ, ಸೆಹನ್ಸಾ, ಮೀರ್‌ಪುರ್, ರಾವಲ್‌ಕೋಟ್, ಖುಯಿರಟ್ಟಾ, ತಟ್ಟಪಾನಿ, ಹಟ್ಟಿಯಾನ್ ಬಾಲಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಇಡೀ ಪಿಒಕೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸಾವಿರಾರು ವಿದ್ಯಾರ್ಥಿಗಳು ಕೂಡ ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಸ್ಥಳೀಯರು ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಇದೀಗ ಈ ವಿಡಿಯೋ ಹಾಗೂ ಫೋಟೋಗಳು ಭಾರಿ ವೈರಲ್ ಆಗಿದ್ದು, ಪಾಕಿಸ್ತಾನದ ಆತಂಕ ಹೆಚ್ಚಾಗಿದೆ.