ಬೆಂಗಳೂರು: ಯುವತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ (Suspicious Death) ಮನೆಯಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ (Subramanyapura Police Station) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ ಎನ್ನಲಾಗಿದೆ ಸಾವನ್ನಪ್ಪಿದ ಯುವತಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಆದರೆ, ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬುಧವಾರ ಸಂಜೆ ಈ ಘಟನೆ ನಡೆದಿದ್ದು, ತಡಾಗಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.