ತೆಹ್ರಾನ್: ಇರಾನ್ ಅಧ್ಯಕ್ಷರಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.
ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಇರಾನ್ (Iran) ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೆ ಈಡಾಗಿದೆ.
ಆದರೆ, ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದ್ದು, ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷರ ಕೆಲವು ಸಹಚರರು, ಕೇಂದ್ರ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಧ್ಯಕ್ಷರ ಬೆಂಗಾವಲು ಪಡೆ ಮೂರು ಹೆಲಿಕಾಪ್ಟರ್‌ಗಳನ್ನು ಒಳಗೊಂಡಿತ್ತು. ಈ ಪೈಕಿ ಎರಡು ಹೆಲಿಕಾಪ್ಟರ್‌ಗಳು ವಿವಿಧ ಸಚಿವರು ಮತ್ತು ಅಧಿಕಾರಿಗಳನ್ನು ಹೊತ್ತು ತಮ್ಮ ಗಮ್ಯಸ್ಥಾನ ತಲುಪಿದ್ದಾರೆ.
ಅಧ್ಯಕ್ಷ ರೈಸಿ ಅವರ ಜೊತೆ ವಿದೇಶಾಂಗ ಸಚಿವ ಹೊಸೈನ್ ಅಮಿರಬ್ದೊಲ್ಲಾಹಿಯಾನ್ ಕೂಡ ಇದ್ದರು ಎನ್ನಲಾಗಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಪ್ರಯಾಣಿಕರ ಸ್ಥಿತಿಯ ಕುರಿತು ಹೆಚ್ಚಿನ ವಿವರ ಬಹಿರಂಗವಾಗಿಲ್ಲ.