ಚಾಮರಾಜನಗರ: ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹೆಜ್ಜೇನು ದಾಳಿ (Hejjenu attack) ನಡೆದಿದ್ದು, ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಹನೂರು ತಾಲೂಕಿನ ಬೆಳತ್ತೂರು ಗ್ರಾಮದಲ್ಲಿ ನಡೆದಿದೆ. ಬಾಳೆ ಬೆಳೆಗೆ ಕೀಟನಾಶಕ ಸಿಂಪಡಿಸುತ್ತಿದ್ದ ಸಂದರ್ಭದಲ್ಲಿ ಹೆಜ್ಜೇನು ದಾಳಿ ನಡೆದಿದೆ. ದಾಳಿಯಲ್ಲಿ ತುಳಸಿದಾಸ್(45) ಸಾವನ್ನಪ್ಪಿದ್ದಾರೆ. ಪತ್ನಿ ಆಶಾಗೆ ಗಂಭೀರ ಗಾಯಗಳಾಗಿದ್ದು, ಹನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.