ಯುವಕನೊಬ್ಬ ಕೈಗಳಿಗೆ ಹಸಿರು ಬಳೆ ತೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಿವಿಲ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಯುವಕ ಪುನೀತ್ ದುಬೆ ಎಂಬಾತನ ಶವವು ಕೈಗಳಿಗೆ ಹಸಿರು ಬಳೆ ತೊಟ್ಟು, ಮದುವನಗಿತ್ತಿಯಂತೆ ಶೃಂಗಾರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಯುವಕ ಕೊಠಡಿಯಲ್ಲಿರುವ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾನೆ. ಯುವಕನ ಮೃತದೇಹ ಕಂಡ ಪೋಷಕರು ಇದು ಕೊಲೆಯಾಗಿರಬಹುದು ಎಂದು ಶಂಕಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸಿಂಗಾರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಚರ್ಚೆ ಶುರುವಾಗಿದೆ. ಆದರೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಎರಡನೇ ವರ್ಷದ ಬಿಎಸ್ಸಿ ಓದುತ್ತಿರುವ ವಿದ್ಯಾರ್ಥಿ ಪುನೀತ್, ಇಂದೋರ್‌ನ ರಂಜಿತ್ ಸಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದಾನೆ. ಮಧ್ಯಪ್ರದೇಶ ಸಾರ್ವಜನಿಕ ಸೇವಾ ಆಯೋಗದ (MPPSC) ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಎನ್ನಲಾಗಿದೆ.