ತಿರುವನಂತಪುರಂ: ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ ಕೇರಳದ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ಮೇ 22ರಂದು ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಕೇರಳದ (Kerala Weather Today) ರಾಜಧಾನಿ ತಿರುವನಂತಪುರಂ ಸೇರಿದಂತೆ 8 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೇರಳದ ಉತ್ತರ ಭಾಗದ 6 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕೇರಳ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ.