ಬೆಂಗಳೂರು: ಸಿಲಿಕಾನ್ ಸಿಟಿಗೆ ಮತ್ತೊಂದು ಹೊಸ ಜ್ವರದ ಆತಂಕ ಶುರುವಾಗಿದೆ.
ಡೆಂಘಿ ಜೊತೆಗೆ ವೆಸ್ಟ್ ನೈಲ್ ಜ್ವರದ (West Nile Fever) ಆತಂಕ ಶುರುವಾಗಿದೆ. ಕೇರಳ ಸೇರಿದಂತೆ ಪಕ್ಕದ ರಾಜ್ಯಗಳಲ್ಲಿ ವೆಸ್ಟ್ ನೈಲ್ ಜ್ವರದ ಪ್ರಕರಣಗಳು ಹೆಚ್ಚಾಗಿವೆ. ತಮಿಳನಾಡಿನ ಬಳಿಕ ಈಗ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ವರದಿಯಾಗಿದೆ. ಇತ್ತ ಬೆಂಗಳೂರಿನಲ್ಲಿ ಕೂಡ ಇದರ ಆತಂಕ ಮನೆ ಮಾಡಿದೆ.
ಕ್ಯೂಲೆಕ್ಸ್ ಜಾತಿಯ ಸೊಳ್ಳೆಗಳಿಂದ ಈ ವೆಸ್ಟ್ ನೈಲ್ ಜ್ವರ ಹರಡುತ್ತಿದೆ. ಜ್ವರ, ತಲೆನೋವು, ಆಯಾಸ, ದೇಹದ ನೋವು, ವಾಕರಿಕೆ, ದದ್ದು ಮತ್ತು ಊದಿಕೊಂಡ ಗ್ರಂಥಿಗಳಂತಹ ರೋಗ ಲಕ್ಷಣಗಳು ಕಂಡುಬರುತ್ತಿವೆ. ಇದು ಗಂಭೀರವಾದರೆ ಜ್ವರ, ತಲೆನೋವು, ಕುತ್ತಿಗೆ ಬಿಗಿತ, ಮೂರ್ಛೆ ಹೋದಂತೆ ಅನುಭವ, ದಿಗ್ಭ್ರಮೆಯಂತಹ ಲಕ್ಷಣಗಳು ಕಾಣಿಸಿಕೊಳ್ಳಬಹುದು. ಕೋಮಾ, ನಡುಕ, ಸೆಳೆತ, ಸ್ನಾಯು ದೌರ್ಬಲ್ಯ, ದೃಷ್ಟಿ ನಷ್ಟ, ಮರಗಟ್ಟುವಿಕೆ ಮತ್ತು ಪಾರ್ಶ್ವವಾಯು ಉಂಟಾಗಬಹುದು ಎಂದು ವೈದ್ಯರು ಹೇಳುತ್ತಾರೆ.
ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.