ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್.ಡಿ. ರೇವಣ್ಣಗೆ ಜಾಮೀನು ಸಿಕ್ಕಿದೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಸುಳಿವು ಸಿಗುತ್ತಿಲ್ಲ. ಈ ಮಧ್ಯೆ ಭವಾನಿ ರೇವಣ್ಣ ಅವರ ಕಾರು ಚಾಲಕನಿಗೆ ಎಸ್ ಐಟಿ ಸಮನ್ಸ್ ಜಾರಿ ಮಾಡಿದೆ.
ಸಂತ್ರಸ್ತೆಯನ್ನು ಚಾಲಕ ಅಜಿತ್ ಕಾರಿನಲ್ಲಿ ಕರೆದೊಯ್ದಿದ್ದ ಆರೋಪ ಕೇಳಿ ಬಂದಿದೆ. ಹೀಗಾಗಿ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಎಸ್ ಐಟಿ ಈಗಾಗಲೇ 2 ಬಾರಿ ಸಮನ್ಸ್ ನೀಡಲಾಗಿದೆ. ಆದರೆ, ಅಜಿತ್ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಭವಾನಿ ಅವರಿಗೂ ಸಂಕಷ್ಟ ತಪ್ಪಿದ್ದಲ್ಲ ಎನ್ನಲಾಗುತ್ತಿದೆ.
ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಹೆಸರನ್ನು ಕೂಡ ಉಲ್ಲೇಖಿಸಲಾಗಿದೆ. ಭವಾನಿ ಕರೆದಿದ್ದಾರೆ ಎಂದು ಹೇಳಿಯೇ ಮಹಿಳೆಯನ್ನು ಕರೆಯಲಾಗಿದೆ ಎಂಬ ಆರೋಪವಿದ್ದು, ಇದಕ್ಕೆ ಪೂರಕ ಸಾಕ್ಷಿ ಇದ್ದರೆ, ಭವಾನಿ ಅವರಿಗೆ ಸಂಕಷ್ಟ ಶುರುವಾಗಲಿದೆ.