ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ನಡೆದಿದೆ ಎನ್ನಲಾದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಜನರ ಪೈಕಿ 86 ಜನರ ವರದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ.
ಈ ಪೈಕಿ ತೆಲುಗು ನಟಿಯರಾದ ಹೇಮಾ (Actress Hema) ಹಾಗೂ ಆಶಿ ರಾಯ್ (Aashi Roy) ಅವರ ರಿಪೋರ್ಟ್ ಗಳು ಕೂಡ ಪಾಸಿಟಿವ್ ಬಂದಿವೆ. ಹೀಗಾಗಿ ತೆಲುಗು ನಟಿ ಹೇಮಾ ಮತ್ತು ಆಶಿ ರಾಯ್ ಡ್ರಗ್ಸ್ ಸೇವಿಸಿರುವುದು ಖಚಿತವಾಗಿದೆ. ಪಾರ್ಟಿಯಲ್ಲಿ ಭಾಗವಹಿಸಿದ್ದ 103 ಜನರ ಬ್ಲಡ್ ನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ 86 ಜನರು ಡ್ರಗ್ಸ್ ಸೇವಿಸಿರುವು ದೃಢಪಟ್ಟಿದೆ.
ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಿರುವ ಸುಳಿವು ಸಿಕ್ಕಿದೆ. ಎಂಡಿಎಂಎ, ಕೊಕೇನ್, ಹೈಡೋಗಾಂಜಾ ಪತ್ತೆಯಾಗಿದೆ. ಬ್ಲಡ್ ರಿಪೋರ್ಟ್ ನಲ್ಲಿ ಪಾಸಿಟಿವ್ ಬಂದವರಿಗೆ ಸಿಸಿಬಿ ನೋಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಹೇಳಲಾಗಿದೆ. ವಾಸು ಎಂಬ ವ್ಯಕ್ತಿಯ ಹುಟ್ಟು ಹಬ್ಬದ ಅಂಗವಾಗಿ ಈ ಪಾರ್ಟಿ ಆಯೋಜಿಸಲಾಗಿತ್ತು. ಈ ವೇಳೆ ಸುಮಾರು 100 ರಿಂದ 150 ಜನರು ಭಾಗವಹಿಸಿದ್ದರು ಎನ್ನಲಾಗಿದೆ.