ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣದಲ್ಲಿ ಎರಡು ಬಾರಿ ಪತ್ರ ಬರೆದರೂ ಉತ್ತರ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಏಪ್ರಿಲ್ 27ಕ್ಕೆ ರಾಜತಾಂತ್ರಿಕ ಪಾಸ್ ಪೋರ್ಟ್ (Diplomatic Passport) ಬಳಸಿ ಬೇರೆ ದೇಶಕ್ಕೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಹೀಗಾಗಿ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಪತ್ರ ಬರೆದಿದ್ದೇನೆ. ಆದರೆ, ಕೇಂದ್ರ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ಮೊದಲ ಪತ್ರಕ್ಕೆ ಉತ್ತರ ಬಾರದ ಹಿನ್ನೆಲೆಯಲ್ಲಿ ಮತ್ತೊಂದು ಪತ್ರ ಬರೆದಿದ್ದೇನೆ. ಆದರೂ ಉತ್ತರ ಬರೆದಿಲ್ಲ ಎಂದು ಹೇಳಿದ್ದಾರೆ.
ಪ್ರಜ್ವಲ್ ಮೇಲೆ ಐಪಿಸಿ ಸೆಕ್ಷನ್ 377ರ ಅಡಿ ಕೇಸ್ ದಾಖಲಾಗಿದ್ದು ಮೂರು ದೂರು ದಾಖಲಾಗಿವೆ. ಹೀಗಾಗಿ ಅರೆಸ್ಟ್ ಮಾಡುತ್ತಾರೆಂದು ವಿದೇಶಕ್ಕೆ ಹೋಗಿ ತಪ್ಪಿಸಿಕೊಂಡಿದ್ದಾರೆ. ವಿಶೇಷ ತನಿಖಾ ತಂಡ (SIT) ಕೋರ್ಟ್‌ನಿಂದ ವಾರೆಂಟ್ ವಾರೆಂಟ್ ತಗೊಂಡಿದೆ. ವಾರೆಂಟ್ ಮಾಹಿತಿಯನ್ನು ಕೇಂದ್ರಕ್ಕೆ ಕಳುಹಿಸಿ ಪತ್ರ ಬರೆದಿದ್ದಾರೆ. ಆದರೂ ಉತ್ತರ ಬಂದಿಲ್ಲ ಎಂದು ಹೇಳಿದ್ದಾರೆ.