ಮೈಸೂರು: ಚನ್ನಗಿರಿ (Channagiri) ಲಾಕಪ್ ಡೆತ್ (Lockup Death) ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಅದು ಲಾಕಪ್ ಡೆತ್ ಅಲ್ಲ ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದು ಲಾಕಪ್ ಡೆತ್ ಅಲ್ಲ. ಅವನಿಗೆ ಮೂರ್ಛೆ ರೋಗ ಇತ್ತು. ಆ ರೋಗದಿಂದ ಆತ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ.
ಆದರೆ, ಎಫ್ ಐಆರ್ ಇಲ್ಲದೆ ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆದೇಶ ಮಾಡಿದ್ದೇನೆ ಎಂದು ಹೇಳಿದ್ದಾರೆ.
ರಾಕೇಶ್ ಸಿದ್ದರಾಮಯ್ಯ ವಿಚಾರದ ಕುರಿತು ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ನನ್ನ ಮಗ ಸತ್ತು ಹೋಗಿ 8 ವರ್ಷ ಕಳೆದಿವೆ. ಆ ವಿಚಾರವನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್ ವಿಚಾರಕ್ಕೂ ಸಂಬಂಧ ಇಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.