ಬೆಂಗಳೂರು: ಕುಟುಂಬಸ್ಥರ ವಿರೋಧದ ಮಧ್ಯೆ ಮಗಳು ಪ್ರೇಮ ವಿವಾಹ (Love Marriage) ಮಾಡಿಕೊಂಡಿದ್ದಕ್ಕೆ ನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಈ ಘಟನೆ ನೆಲಮಂಗಲ ನಗರದ (Nelamangala City) ಸರ್ಕಾರಿ ಆಸ್ಪತ್ರೆ ಎದುರಿನ ಪಾರ್ಕ್ ನಲ್ಲಿ ನಡೆದಿದೆ. ನೆಲಮಂಗಲ ತಾಲ್ಲೂಕಿನ ಅಂಜನಾ ನಗರದ 45 ವರ್ಷದ ಮಹಿಳೆ ಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಆತ್ಮಹತ್ಯೆ ಮಾಡಿಕೊಂಡಿದ್ದ ಲಕ್ಷ್ಮಮ್ಮ ಅವರ ಮಗಳು ಇತ್ತೀಚೆಗಷ್ಟೇ ಕುಟುಂಬಸ್ಥರ ವಿರೋಧದ ಮಧ್ಯೆ ಪ್ರೇಮ ವಿವಾಹ ಮಾಡಿಕೊಂಡಿದ್ದಳು. ಇದರಿಂದಾಗಿ ಮನನೊಂದು ಲಕ್ಷ್ಮಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆ (Nelamangala Town Police Station) ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.