ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ನಮಗೆ ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದು ಹೇಳಿದ್ದಾರೆ.
ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಅವರು ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಜೂನ್ ಆರರವರೆಗೆ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ನಮ್ಮ ಅಭ್ಯರ್ಥಿಗಳು ಗೆಲ್ಲಲು 19 ರಿಂದ 20 ಮತಗಳು ಅಗತ್ಯವಿದ್ದು, ಬಿಜೆಪಿಯವರು, ಜೆಡಿಎಸ್ ಅವರು ಒಬ್ಬರಿಗೆ ನಾಮಪತ್ರಗಳ ಪರಿಶೀಲನೆಯ ನಂತರ ತಿಳಿಯಲಿದೆ. ಒಂದು ವೇಳೆ ಜಾಸ್ತಿಯಾದರೆ ಚುನಾವಣೆ ನಡೆಯಬೇಕು. ಚುನಾವಣೆ ನಡೆದರೂ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಹೇಳಿದ್ದರೆ.