ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ತೆಲುಗು ನಟಿ ಹೇಮಾರನ್ನು ಬಂಧಿಸಿದ್ದಾರೆ.
ತನಿಖೆ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದ ಆರೋಪದ ಮೇಲೆ ತೆಲಗು ನಟಿ ಹೇಮಾ (Hema) ಅವರನ್ನು ಸಿಸಿಬಿ ಪೊಲೀಸರು (CCB) ಬಂಧಿಸಿದ್ದಾರೆ. ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಹೇಮಾ ರಿಪೋರ್ಟ್ ಪಾಸಿಟೀವ್ ಬಂದಿತ್ತು. ಆಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಅನಾರೋಗ್ಯದ ನೆಪ ಹೇಳಿ ವಿಚಾರಣೆಗೆ ಹಾಜರಾಗದೇ ಸಮಯಾವಕಾಶ ಕೇಳಿದ್ದರು. ಆನಂತರ ಅಧಿಕಾರಿಗಳು 2ನೇ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು 4 ಗಂಟೆಗೆ ಬೆಂಗಳೂರಿಗೆ ಆಗಮಿಸಿರುವ ಅವರು ಬುರ್ಖಾ ತೊಟ್ಟು ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ಈ ವೇಳೆ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆದರೆ, ಸಿಸಿಬಿ ವಿಚಾರಣೆ ಸಂದರ್ಭದಲ್ಲಿ ಸಮರ್ಪಕ ಉತ್ತರ ನೀಡುತ್ತಿಲ್ಲ ಎನ್ನಲಾಗಿದೆ. ಕೆಸಿ ಜನರಲ್ ಆಸ್ಪತ್ರೆಗೆ ಮೆಡಿಕಲ್ ಟೆಸ್ಟ್‌ಗಾಗಿ ಪೊಲೀಸರು ಕರೆದೊಯ್ದಿದ್ದಾರೆ. ವೈದ್ಯರು ನಟಿ ಹೇಮಾ ಅವರ ಹೇರ್ ಸ್ಯಾಂಪಲ್ ಸಂಗ್ರಹಿಸಿದ್ದಾರೆ. ಅಲ್ಲದೇ ಅವರಿಗೆ ಜ್ವರ ಇರುವ ಹಿನ್ನೆಲೆಯಲ್ಲಿ ಚಿಕಿತ್ಸೆ ಕೂಡ ನೀಡಲಾಗಿದೆ.