ಬೆಂಗಳೂರು: ಮಾಜಿ ಸಚಿವ ಹಾಗೂ ಆನೇಕಲ್ (Anekal) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕೇಶವಮೂರ್ತಿ(85) ಇಹಲೋಕ ತ್ಯಜಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಕೇಶವಮೂರ್ತಿ (MP Keshavmurthy) ಹಲವು ದಿನಗಳಿಂದಲೂ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಆನೇಕಲ್ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಇವರು, ವೀರಪ್ಪಮೊಯ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಅರಣ್ಯ ಮತ್ತು ಸಣ್ಣ ನೀರಾವರಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆನೇಕಲ್ ತಾಲ್ಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೇಶವಮೂರ್ತಿ ಮಾಡಿದ್ದರು.