ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಮಂಜುನಾಥ್ ಅವರು ಕಾಂಗ್ರೆಸ್ ಡಿಕೆ ಸುರೇಶ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
8ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಆದಾಗ 88 ಸಾವಿರ ಮತಗಳಿಂದ ಡಾ ಮಂಜುನಾಥ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಹೋದರನ ಕ್ಷೇತ್ರದ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ಗೆ ಟೆನ್ಷನ್ ಆರಂಭವಾಗಿದೆ. ಆಪ್ತರಿಗೆ ಕರೆ ಮಾಡುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್, ಮತ ಎಣಿಕೆ ಕೇಂದ್ರದಲ್ಲಿರುವ ಆಪ್ತರ ಜೊತೆಗೆ ಮಾತನಾಡಿ ಟೆನ್ಶನ್ ನಲ್ಲಿ ಮಾತನಾಡುತ್ತಿದ್ದಾರೆ.
ಸದಾಶಿವನಗರ ಮನೆಯಲ್ಲಿ ಇದ್ದುಕೊಂಡೇ ಆಪ್ತರಿಂದ ಮಾಹಿತಿ ಪಡೆಯುತ್ತಿದ್ದಾರೆ. ಅಣ್ಣನ ಜೊತೆಯಲ್ಲೇ ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಮನೆಯಲ್ಲಿ ಕುಳಿತು ಟಿವಿ ವೀಕ್ಷಿಸುತ್ತಿದ್ದಾರೆ. ಸೋಲಿನ ಭೀತಿಯಲ್ಲಿ ಯಾರೊಂದಿಗೂ ಮಾತನಾಡದೆ, ಕೇವಲ ಎಣಿಕಾ ಕೇಂದ್ರದಲ್ಲಿರುವ ತನ್ನ ಆಪ್ತರಿಗೆ ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.