ವಿವಾದಾತ್ಮಕ ಹೇಳಿಕೆಗಳಿಂದಲೇ ಭಾರೀ ಸದ್ದು ಮಾಡುತ್ತಿದ್ದ ನಟಿ ಕಂಗನಾ ರಣಾವತ್ ಮಂಡಿ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ.
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ (Loksabha Election 2024) ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕಂಗನಾ ರಣಾವತ್ (Kangana Ranaut) ಮೊದಲ ಸ್ಪರ್ಧೆಯಲ್ಲಿಯೇ ಗೆಲುವು ಕಂಡಿದ್ದಾರೆ. 70,000 ಮತಗಳಿಂದ ನಟಿ ಗೆದ್ದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಎದುರು ಸ್ಪರ್ಧೆ ಮಾಡಿ ಗೆದ್ದು ತೋರಿಸಿದ್ದಾರೆ. ಕಂಗನಾ ಮುತ್ತಜ್ಜ, ಸರ್ಜು ಸಿಂಗ್ ರಣಾವತ್ ಹಿಂದೆ ಶಾಸಕರಾಗಿದ್ದರು. ಅವರು ಕಾಂಗ್ರೆಸ್ ಪಕ್ಷದಲ್ಲಿದ್ದರು. ಆದರೆ ಕಂಗನಾ, ಸದ್ಯ ಬಿಜೆಪಿಯಿಂದ ಕಣಕ್ಕೆ ಇಳಿದು ಗೆದ್ದಿದ್ದಾರೆ. ಚುನಾವಣೆ ಗೆದ್ದರೆ ಬಾಲಿವುಡ್‌ಗೆ ವಿದಾಯ ಹೇಳುತ್ತೇನೆ ಎಂದು ನಟಿ ಹೇಳಿದ್ದರು. ಈಗ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುವುದನ್ನು ಕಾಯ್ದು ನೋಡಬೇಕಿದೆ.