ಮಂಗಳೂರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಾಗೂ ಆನಂತರ ಸ್ವಯಂ ನಿವೃತ್ತಿ ಪಡೆದುಕೊಂಡು ಕಾಂಗ್ರೆಸ್‌ಗೆ ಸೇರಿದ್ದ ಸಸಿಕಾಂತ್ ಸೆಂಥಿಲ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಸೆಂಥಿಲ್ ಅವರು ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿದ್ದರು. ಇದೀಗ ಡಿಎಂಕೆಯ ನಲ್ಲತಂಬಿ ಕೆ. ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಸೆಂಥಿಲ್ ಅವರು ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿದ್ದ ವೇಳೆ, ಅತ್ಯುತ್ತಮ ಹಾಗೂ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಆನಂತರ ಅವರು ಸ್ವಯಂ ರಾಜೀನಾಮೆ ಪಡೆದು ರಾಜಕೀಯ ಪ್ರವೇಶಿಸಿದ್ದರು. ಸದ್ಯ ಚುನಾವಣೆಯಲ್ಲಿ ಗೆದ್ದು ಲೋಕಸಭೆ ಪ್ರವೇಶಿಸಿದ್ದಾರೆ.