ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರದ ಪೈಕಿ, ಉತ್ತರ ಕನ್ನಡದ ನೂತನ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅತಿ ಹೆಚ್ಚು ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
3,37,428 ಮತಗಳ ಅಂತರದಿಂದ ಜಯಗಳಿಸಿ, ಸಂಸತ್ ಪ್ರವೇಶಿಸುತ್ತಿರುವ ಕಾಗೇರಿ, ಕಾಂಗ್ರೆಸ್‌ನ ಅಂಜಲಿ ನಿಂಬಾಳ್ಕರ್ ಅವರನ್ನು ಮಣಿಸಿದ್ದಾರೆ. ಬ್ರಾಹ್ಮಣ ಸಮುದಾಯದಲ್ಲಿ ಗುರುತಿಸಿಕೊಂಡಿರುವ ಕಾಗೇರಿ ಮೊದಲ ಬಾರಿಗೆ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಈ ಮತಗಳ ಅಂತರದಿಂದ ಆಯ್ಕೆಯಾಗಿರುವುದು ದಾಖಲೆಯಾಗಿದ್ದು, ರಾಜ್ಯದ 28 ಸಂಸದರ ಪೈಕಿ ಇವರೇ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದವರಾಗಿದ್ದಾರೆ.