ನವದೆಹಲಿ: ಮೋದಿ ನಾಯಕತ್ವಕ್ಕೆ ಎನ್ ಡಿಎ ನಾಯಕತ್ವ ಬಹುಪರಾಕ್ ಎಂದಿದೆ.
ದೆಹಲಿಯಲ್ಲಿ ಎನ್‌ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸರ್ಕಾರ ರಚನೆಯ ವಿಷಯವಾಗಿ ಚರ್ಚಿಸುವುದಕ್ಕಾಗಿ ನಡೆದ ನಾಯಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ನರೇಂದ್ರ ಮೋದಿ ನಿವಾಸದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲಾ ಎನ್‌ಡಿಎ ನಾಯಕರು ಭಾಗಿಯಾಗಿದ್ದರು. ಎಲ್ಲರೂ ಮೋದಿ ನಾಯಕತ್ವಕ್ಕೆ ಜೈ ಅಂದರು. ನರೇಂದ್ರ ಮೋದಿ ಪ್ರಧಾನಿಯಾಗಲಿ. ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಧ್ಯವಾದಷ್ಟು ಬೇಗ ಸರ್ಕಾರ ರಚನೆಯಾಗಲಿ. ಸರ್ಕಾರ ರಚನೆಯಲ್ಲಿ ವಿಳಂಬ ಧೋರಣೆ ಬೇಡ ಎಂದು ನಿತೀಶ್ ಕುಮಾರ್ ಹೇಳಿದರು.
ಖಾತೆ ಹಂಚಿಕೆ ಬಗ್ಗೆ ಬೇಡಿಕೆ ಇದ್ದರೂ ಸಹ ಸರ್ಕಾರ ರಚನೆಗೆ ಮುಖ್ಯ ಎಂದು ಚಂದ್ರಬಾಬು ನಾಯ್ಡು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.