ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ (South Teachers Constituency) ದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಭರ್ಜರಿಯಾಗಿ ಜಯ ಸಾಧಿಸಿದ್ದು, ಕಾಂಗ್ರೆಸ್ (Congress) ಹೀನಾಯ ಸೋಲು ಕಂಡಿದೆ.
ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರು 4,622 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ವಾಟಾಳ್ ನಾಗರಾಜ್ ಗೆ ಕೇವಲ 84 ಮತಗಳು ಸಿಕ್ಕಿವೆ. 1,049 ಮತಗಳು ಅಸಿಂಧುವಾಗಿವೆ. ಲೋಕಸಭಾ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಸೋಲು ಕಂಡಿತ್ತು. ಈಗ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ನ ಅಭ್ಯರ್ಥಿ ಮರಿತಿಬ್ಬೇಗೌಡ ಸೋತಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಮೈತ್ರಿ ಪಕ್ಷ ಗೆಲವು ದಾಖಲಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಸತತ ನಾಲ್ಕು ಬಾರಿ ಗೆಲುವು ಕಂಡಿದ್ದರು. ಕಳೆದ ಬಾರಿ ಜೆಡಿಎಸ್ ನಿಂದ ಗೆದ್ದು ನಂತರದ ದಿನಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದ ಮರಿತಿಬ್ಬೆಗೌಡಗೆ ಜೆಡಿಎಸ್ ಸೋಲಿನ ಕಹಿ ಉಣಿಸಿದೆ.