ದೆಹಲಿ: ಚುನಾವಣೆಯಲ್ಲಿ ಇಂಡಿಯಾ (INDIA) ಬಣ ಉತ್ತಮ ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಈಗ ವಿರೋಧ ಪಕ್ಷದ ಸ್ಥಾನಕ್ಕಾಗಿ ಚರ್ಚೆಗಳು ಶುರುವಾಗಿವೆ. 99 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ (Congress) ಈಗ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಅರ್ಹವಾಗಿದೆ. ರಾಹುಲ್ ಗಾಂಧಿ (Rahul Gandhi) ಅವರು ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸಬೇಕೆಂಬ ಕೂಗು ಜೋರಾಗಿದೆ.
ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಕೆಳಮನೆಯಲ್ಲಿ ವಿರೋಧ ಪಕ್ಷದ ನಾಯಕರಾಗಬೇಕು ಎಂದು ಮನವಿ ಮಾಡಿದ್ದಾರೆ. ನಾಯಕ ರಾಹುಲ್ ಗಾಂಧಿಯವರ ಹೆಸರಿನ ಮೇಲೆ ಮತ ಕೇಳಿದೆ. ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಬೇಕು ಎಂದು ನಾನು ಭಾವಿಸುತ್ತೇನೆ. ಚುನಾಯಿತ ಕಾಂಗ್ರೆಸ್ ಸಂಸದರೂ ಇದೇ ರೀತಿ ಯೋಚಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ರಾಜ್ಯಸಭಾ ಸಂಸದ ವಿವೇಕ್ ಟಂಖಾ, ರಾಹುಲ್ ಪ್ರಚಾರವನ್ನು ಮುಂದಾಳತ್ವದಲ್ಲಿ ಮುನ್ನಡೆಸಿದರು. ಪಕ್ಷದ ಮುಖವಾಗಿದ್ದರು. ಅವರು ಲೋಕಸಭೆಯ ಸಂಸದೀಯ ಪಕ್ಷದ ನಾಯಕತ್ವ ವಹಿಸುವ ಕರ್ತವ್ಯವನ್ನು ಹೊಂದಿದ್ದಾರೆ.ರಾಹುಲ್ ಗಾಂಧಿ ಅವರು ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಪಕ್ಷದ ನಾಯಕರು/ಸಂಸದರು ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ, “ಆ ಸ್ಥಾನ ಕಾಂಗ್ರೆಸ್‌ಗೆ ಬರಲಿದೆ ಎಂದು ನಾನು ಭಾವಿಸುತ್ತೇನೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ, ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ ಅವರೇ ವಿರೋಧ ಪಕ್ಷದ ನಾಯಕರಾಗಬೇಕು ಎಂದು ಹೇಳಿದ್ದಾರೆ.