ಆನೇಕಲ್: ಇಲಿ ಬಿದ್ದಿದ್ದ ವಿಷ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಜಿಗಣಿ(Jigani) ಸಮೀಪದ ಎಸ್.ವ್ಯಾಸ ಯೂನಿವರ್ಸಿಟಿ(S-VYASA UNIVERSITY)ಯಲ್ಲಿ ಈ ಘಟನೆ ನಡೆದಿದೆ.
ಜೂ. 5ರಂದು ಕಾಲೇಜು ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಊಟ ಮಾಡಿದ ಕೂಡಲೇ ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದಾರೆ. ನಂತರ ಊಟ ಪರಿಶೀಲನೆ ಮಾಡಿದಾಗ ಪಲ್ಯದಲ್ಲಿ ಇಲಿ ಬಿದ್ದಿದ್ದನ್ನು ಕಂಡು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ನಂತರ ಆಡಳಿತ ಮಂಡಳಿ, ಇಂತಹ ತಪ್ಪುಗಳಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ ಮೇಲೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.