ನವದೆಹಲಿ: ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ (Irfan Solanki)ಗೆ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಕಾನ್ಪುರದ ಜಜ್ಮೌ ಪ್ರದೇಶದಲ್ಲಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾದ ಹಿನ್ನೆಲೆಯಲ್ಲಿ 7 ವರ್ಷಗಳ ಜೈಲು ಶಿಕ್ಷೆಯನ್ನು ಕಾನ್ಪುರದ (Kanpur) ಸಂಸದರು-ಶಾಸಕರ ನ್ಯಾಯಾಲಯ ನೀಡಿದೆ. ಇರ್ಫಾನ್ ಸೋಲಂಕಿ, ಆತನ ಸಹೋದರ ರಿಜ್ವಾನ್ ಸೋಲಂಕಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಲ್ಲರಿಗೂ ಶಿಕ್ಷೆ ವಿಧಿಸಲಾಗಿದೆ.
2022ರ ನವೆಂಬರ್ ತಿಂಗಳಲ್ಲಿ ಜಜ್ಮೌದಲ್ಲಿ ವಿಡಿಪಿಡಬ್ಲ್ಯೂ ಅವರ ಮನೆಗೆ ಬೆಂಕಿ ಹಚ್ಚಿದ ಆರೋಪದಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇರ್ಫಾನ್ ಸೋಲಂಕಿ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. ಸದ್ಯದ ಕಾನೂನಿನಂತೆ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪಡೆಯುವ ಯಾವುದೇ ಶಾಸಕರು ಶಾಸಕಾಂಗದಲ್ಲಿ ಅವರ ಸ್ಥಾನದಿಂದ ಅನರ್ಹರಾಗುತ್ತಾರೆ.