ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಈ ಘಟನೆ ಇಡೀ ದೇಶದಲ್ಲಿಯೇ ಸಂಚಲನ ಮೂಡಿಸಿದೆ. ಅಲ್ಲದೇ, ಭಾರೀ ಅಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಹಿರಿಯ ನಟ ಜಗ್ಗೇಶ್ ಮಾರ್ಮಿಕವಾಗಿ ಟ್ವೀಟ್ ಮಾಡುವ ಮೂಲಕ ಘಟನೆ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.
ಸರ್ವ ಆತ್ಮಾನೇನ ಬ್ರಹ್ಮ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’.
ಕರ್ಮ ಜೀವನವನ್ನು ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತತ್ತಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’.
ಮದಕ್ಕೆ ಕಾರುಣ್ಯದ ಅರಿವಿಲ್ಲಾ’ ಎಂದು ಮಾರ್ಮಿಕವಾಗಿ ಬರೆದು, ದರ್ಶನ್ ಮಾಡಿದ್ದು, ತಪ್ಪು ಆತ ಮಾಡಿದ ಕರ್ಮ ಆತನನ್ನು ಬಿಡುವುದಿಲ್ಲ ಎಂದು ಬರೆದಿದ್ದಾರೆ.
