ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಬಂಧನ ಭೀತಿ ಶುರುವಾಗಿದೆ.
ಇತ್ತೀಚೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಹಾಜರಾಗಲು ಯಡಿಯೂರಪ್ಪ ಕಾಲಾವಕಾಶ ಕೇಳಿದ್ದಾರೆ.
ಹೈಕೋರ್ಟ್‌ನಲ್ಲಿ ಎಫ್‌ಐಆರ್ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಸರ್ಕಾರದ ಪರ ವಾದಿಸಲು ವಿಶೇಷ ಅಭಿಯೋಜಕರಾಗಿ ವಕೀಲ ಆಶೋಕ್ ನಾಯಕ್ ನೇಮಕ ಮಾಡಲಾಗಿದೆ. ಆದರೆ, ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯು ಹೈಕೋರ್ಟ್ ನಲ್ಲಿ ವಜಾ ಆದರೆ, ಮಾಜಿ ಸಿಎಂ ಯಡಿಯೂರಪ್ಪ ಬಂಧನ ಆಗುವುದು ನಿಶ್ಚಿತ ಎನ್ನಲಾಗುತ್ತಿದೆ.
ಪೋಕ್ಸೋ ಪ್ರಕರಣದಲ್ಲಿ ಆರೋಪಿ ಬಂಧನ ಕಡ್ಡಾಯವಾಗಿದ್ದು, ಹೈಕೋರ್ಟ್ ಒಂದು ವೇಳೆ ಗರಂ ಆದರೆ ಕೂಡಲೇ ಬಂಧನ ಪ್ರಕ್ರಿಯೆ ನಡೆಯಲಿದೆ ಎನ್ನಬಹುದು.