ನವದೆಹಲಿ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಕನ್ನಡದ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ತಮ್ಮ ಅಧಿಕಾರ ಆರಂಭಿಸಿದ್ದಾರೆ.
ಬುಧವಾರ ತಮ್ಮ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ. ಉದ್ಯೋಗ ಭವನದ ಉಕ್ಕು ಸಚಿವಾಲಯದ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ, ಕರ್ನಾಟಕದ ದೇವದಾರಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆ ಸಂಬಂಧಿಸಿದ ಕಡಿತಕ್ಕೆ ಅವರು ಸಹಿ ಹಾಕಿದ್ದಾರೆ.
ಆ ನಂತರ ಆ ಕಡತವನ್ನು ಕೇಂದ್ರದ ಹಣಕಾಸು ಇಲಾಖೆ ಅನುಮೋದನೆಗೆ ಕಳುಹಿಸಲಾಯಿತು. ಬಳ್ಳಾರಿ ಜಿಲ್ಲೆಯಲ್ಲಿ ಉದ್ದೇಶಿತ ಗಣಿಗಾರಿಕೆ ಯೋಜನೆ ಇದಾಗಿದ್ದು, ಕುದುರೆಮುಖ ಕಬ್ಬಿಣ ಅದಿರು ಕಂಪನಿ (KIOCL Limited) ಯೋಜನೆಯನ್ನು ನಿರ್ವಹಿಸಲಿದೆ. ಈ ಯೋಜನೆ ಹಲವು ದಿನಗಳಿಂದ ಬಾಕಿ ಉಳಿದಿತ್ತು. ಇದಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದಂತಾಗಿದೆ.
