ನರೇಂದ್ರ ಮೋದಿ (Narendra Modi) ಅವರು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.
ಮೆಗಾ ಸ್ಟಾರ್’ ಚಿರಂಜೀವಿ (Chiranjeevi) ಹಾಗೂ ‘ಪವರ್ ಸ್ಟಾರ್’ ಪವನ್ ಕಲ್ಯಾಣ್ (Pawan Kalyan) ಅವರೊಂದಿಗೆ ಮೋದಿ ಆತ್ಮೀಯವಾಗಿ ಮಾತನಾಡಿದರು. ಅಲ್ಲದೇ, ಸಹೋದರರನ್ನು ಅಕ್ಕ ಪಕ್ಕ ನಿಲ್ಲಿಸಿಕೊಂಡು ಒಗ್ಗಟ್ಟು ಪ್ರದರ್ಶಿಸುವ ರೀತಿಯಲ್ಲಿ ಮಾಧ್ಯಮದ ಕ್ಯಾಮೆರಾಗಳಿಗೆ ಮೋದಿ ಪೋಸ್ ನೀಡಿದ್ದು, ಈ ಫೋಟೋ ವೈರಲ್ ಆಗಿದೆ.
ಚಂದ್ರಬಾಬು ನಾಯ್ಡು 4ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ನಿತಿನ್ ಗಡ್ಕರಿ, ಅಮಿತ್ ಶಾ ಹಾಗೂ ಜೆಪಿ ನಡ್ಡಾ ಕೂಡ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾದರು. ಶಿವಸೇನೆಯ ಏಕನಾಥ್ ಶಿಂಧೆ, ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಕೂಡ ಭಾಗಿ ಆಗಿದ್ದರು. ವಿಜಯವಾಡದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಹಲವರು ಆಗಮಿಸಿದ್ದರು. ಸೆಲೆಬ್ರಿಟಿಗಳು ಸೇರಿದಂತೆ ಹಲವರು ಇದ್ದರು.
