ಮಾಜಿ ಸಿಎಂ ಯಡಿಯೂರಪ್ಪ (Yediyurappa) ಬಂಧನಕ್ಕೆ ಸಿಐಡಿ ಸಿದ್ಧತೆ ಮಾಡಿಕೊಂಡಿದೆ ಎಂಬುವುದು ಮೂಲಗಳಿಂದ ತಿಳಿದು ಬರುತ್ತಿದೆ.
ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಬಿಎಸ್‌ವೈ ವಿರುದ್ಧ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಈ ದೂರು ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ದಾಖಲಾಗಿತ್ತು. ಈ ಪ್ರಕರಣವನ್ನು ಸರ್ಕಾರವು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.
ಸದ್ಯ ದೂರು ನೀಡಿದ್ದ ಸಂತ್ರಸ್ತೆ ಮೃತಪಟ್ಟಿದ್ದಾರೆ. ಸಂತ್ರಸ್ತೆಯ ಪುತ್ರ ಹೈಕೋರ್ಟ್ ಮೆಟ್ಟಿಲೇರಿ ಪ್ರಕರಣದ ದಾಖಲಾಗಿ ಮೂರು ತಿಂಗಳಾದರೂ ಯಾವುದೇ ಬೆಳವಣಿಗೆ ನಡೆದಿಲ್ಲ. ಯಡಿಯೂರಪ್ಪ ಅವರನ್ನು ಬಂಧಿಸಿಲ್ಲ ಎಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಇದರ ಬೆನ್ನಲ್ಲಿಯೇ ಯಡಿಯೂರಪ್ಪನವರಿಗೆ ಇಂದೇ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿ ಮಾಡಿತ್ತು. ಆದರೆ ಬುಧವಾರ ಯಡಿಯೂರಪ್ಪ ದೆಹಲಿಯಲ್ಲಿದ್ದರು. ವಿಚಾರಣೆಗೆ ಹಾಜರಾಗದ ಕಾರಣ ಜಾಮೀನು ರಹಿತ ವಾರೆಂಟ್‌ಗೆ (Non Bailable Warrant) ಸಿಐಡಿ ಈಗ 42ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಕೋರ್ಟ್ ಅರ್ಜಿ ಪುರಸ್ಕರಿಸಿದರೆ ಅರೆಸ್ಟ್ ವಾರೆಂಟ್ ಪಡೆದು ಯಡಿಯೂರಪ್ಪ ಅವರನ್ನು ಸಿಐಡಿ ಬಂಧಿಸುವ ಸಾಧ್ಯತೆಯಿದೆ.