ಬೆಂಗಳೂರು: ಕೊಲೆ ಪ್ರಕರಣದ ಆರೋಪಿ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ನಿನ್ನೆಯಷ್ಟೇ ಪತಿಯನ್ನು ಅನ್ ಪಾಲೋ ಮಾಡಿದ್ದರು. ಆದರೆ, ಇಂದು ಇನ್‌ಸ್ಟಾಗ್ರಾಂ (Instagram) ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ.
ದರ್ಶನ್ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗುತ್ತಿದ್ದಂತೆ ಅವರನ್ನು ಅನ್ ಫಾಲೋ ಮಾಡಿ, ಡಿಪಿ ರಿಮೂವ್ ಮಾಡಿದ್ದರು. ಆದರೆ ಇಂದು ವಿಜಯಲಕ್ಷ್ಮಿ ಇನ್ ಸ್ಟಾಗ್ರಾಂ ಖಾತೆಯನ್ನೇ ಡಿಲಿಟ್ ಮಾಡಿದ್ದಾರೆ.
ಬಳಕೆದಾರರು ಇನ್ ಸ್ಟಾದಲ್ಲಿ ಮೆಸೇಜ್ ಮಾಡಿ ನಿಂದನೆ ಮಾಡುತ್ತಿದ್ದರಿಂದಾಗಿ ಬೇಸರಗೊಂಡು ಈ ನಿರ್ಧಾರ ಕೈಗೊಂಡಿರಬಹುದು ಎನ್ನಲಾಗಿದೆ. ಆದರೂ ವಿಜಯಲಕ್ಷ್ಮಿ Dactivate ಮಾಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಡಿ ಬಾಸ್ ಗ್ಯಾಂಗ್ ಚಿತ್ರಹಿಂಸೆ ನೀಡಿ ಕೊಲೆ ಮಾಡಿದೆ ಎನ್ನಲಾಗಿದೆ. ಹೀಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ ತುಂಬಾ ಬೇಸರಗೊಂಡಿದ್ದಾರೆ.