ದಾವಣಗೆರೆ: ದಾರಿಯಲ್ಲಿ ಹೋಗೋರು ಯಾರೋ ದೂರು ನೀಡಿದ ಮಾತ್ರಕ್ಕೆ ಯಡಿಯೂರಪ್ಪ ಅವರನ್ನು ಬಂಧಿಸಬೇಕಾ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 53 ಜನರ ವಿರುದ್ಧ ದೂರು ನೀಡಿದ್ದಾರೆ. ಹೀಗೆ ದೂರು ಕೊಟ್ಟಿರುವುದಕ್ಕೆ ಬೆಲೆ ಇರುತ್ತದೆಯಾ? ಎಂದು ಪ್ರಶ್ನಿಸಿದ್ದಾರೆ.
ದರ್ಶನ್ ಮತ್ತು ಗ್ಯಾಂಗ್‌ನಿಂದ ಕೊಲೆ ಪ್ರಕರಣ ಕುರಿತು ಮಾತನಾಡಿದ ಅವರು, ರೇಣುಕಾಸ್ವಾಮಿಗೆ ಬುದ್ಧಿಹೇಳಿ ಕಳುಹಿಸಬೇಕಿತ್ತು. ಆದರೆ ಸಾಯುವಂತೆ ಹೊಡೆಯಬಾರದಿತ್ತು. ಹತ್ಯೆ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದಾರೋ ಅಂಥವರಿಗೆ ಶಿಕ್ಷೆ ಆಗಬೇಕು. ದರ್ಶನ್ ಆಗಲಿ ಅಥವಾ ಬೇರೆ ಯಾರೇ ಆಗಿರಲಿ ಸಾಯುವಂತೆ ಹೊಡೆಯಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.