ರಾಮನಗರ: ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್ (BJP MP Dr Manjunath) ಮಾನವೀಯತೆ ಮೆರೆದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ರಸ್ತೆ ಅಪಘಾತದಲ್ಲಿ(Accident) ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ರಾಮನಗರದ (Ramanagar) ಕನಕಪುರ- ಸಾತನೂರು ಮಾರ್ಗ ಮಧ್ಯೆ ಡಾ.ಸಿ.ಎನ್. ಮಂಜುನಾಥ್ ಅವರು ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತವೊಂದು ಸಂಭವಿಸಿದೆ. ಕೂಡಲೇ ಸಂಸದರು ಗಾಯಾಳುಗಳನ್ನು ಪರೀಕ್ಷಿಸಿದ್ದಾರೆ. ಬಳಿಕ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿಸಿದ್ದಾರೆ.
ಗಾಯಾಳುಗಳಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಂಸದರ ಈ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಸಂಸದ ಮಂಜುನಾಥ್ ಅವರು ಖ್ಯಾತ ಹೃದ್ರೋಗ ವೈದ್ಯರು. ಹಲವು ವರ್ಷಗಳ ಕಾಲ ಬೆಂಗಳೂರಿನ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದರು. ಈ ಸಂದರ್ಭದಲ್ಲಿ ಸಾಕಷ್ಟು ಬಡರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿ ಜನರ ಮೆಚ್ಚುಗೆ ಗಳಿಸಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸ್ಪರ್ಧಿಸಿ, ಜಯ ಸಾಧಿಸಿದ್ದರು.
ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಹಾಲಿ ಕಾಂಗ್ರೆಸ್ ಸಂಸದರಾಗಿದ್ದ ಪ್ರಭಾವಿ ನಾಯಕ ಡಿಕೆ ಸುರೇಶ್ ರನ್ನು ಭಾರೀ ಮತಗಳ ಅಂತರದಿಂದ ಸೋಲಿಸಿದ್ದರು.
