ದೆಹಲಿ: ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆಯೊಂದು ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಬಿಹಾರದ (Bihar) ಅರಾರಿಯಾದಲ್ಲಿ ಉದ್ಘಾಟನೆಗೊಳ್ಳಬೇಕಿದ್ದ ಸೇತುವೆಯ (bridge Collapse) ಒಂದು ಭಾಗ ಮಂಗಳವಾರ ಕುಸಿದು ಬಿದ್ದಿದೆ. ಸಿಕ್ತಿ ಪ್ರದೇಶದಲ್ಲಿ ಬಕ್ರಾ ನದಿಗೆ ಅಡ್ಡಲಾಗಿ 12 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವಿನ ಪ್ರಯಾಣವನ್ನು ಸುಲಭಗೊಳಿಸುವುದಕ್ಕಾಗಿ ಈ ಸೇತುವೆಯನ್ನು ನಿರ್ಮಿಸಲಾಗಿತ್ತು.
ಸಿಕ್ತಿ ಶಾಸಕ ವಿಜಯ್ ಕುಮಾರ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಸೇತುವೆ ಕುಸಿದಿದೆ. ಈ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತೇವೆ. ಸೇತುವೆ ನಿರ್ಮಾಣಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಆರೋಪಿಸಿದ್ದಾರೆ. ಕುರಿತು ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಇನಾಯತ್ ಖಾನ್ ಹೇಳಿದ್ದಾರೆ.
