ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿನ ತಾಡೆಪಲ್ಲಿಯಲ್ಲಿ ನಿರ್ಮಾಣವಾಗುತ್ತಿದ್ದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (YSRCP) ಕಚೇರಿಯನ್ನು ಧ್ವಂಸ ಮಾಡಲಾಗಿದೆ.
ಮುನ್ಸಿಪಲ್ ಕಾರ್ಪೊರೇಷನ್ (MTMC) ವತಿಯಿಂದ ನೆಲಸಮಗೊಳಿಸಲಾಗಿದೆ. ಆಂಧ್ರ ಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಧಿಕಾರ ಹಾಗೂ ಮಂಗಲಗಿರಿ ತಡೆಪಲ್ಲಿ ನಗರ ಪಾಲಿಕೆ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಕಟ್ಟಡವನ್ನು ಧ್ವಂಸಗೊಳಿಸುವ ಕೆಲಸ ಮಾಡಿದ್ದಾರೆ.
ಕಟ್ಟಡ ಧ್ವಂಸಗೊಳಿಸಿದ ಬೆನ್ನಲ್ಲೇ ವೈಎಸ್‌ಆರ್‌ಸಿಪಿ, ಟಿಡಿಪಿ ವಿರುದ್ಧ ಹರಿಹಾಯ್ದಿದೆ. ತನಿಖೆ ಕೋರ್ಟ್‌ನಲ್ಲಿದ್ದರೂ ಧ್ವಂಸಗೊಳಿಸುವ ಕ್ರಮ ಮುಂದುವರಿದಿದೆ. ಇದು ಸೇಡಿನ ರಾಜಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ವೈಎಸ್‌ಆರ್‌ಸಿಪಿ ಗುಂಟೂರು ಜಿಲ್ಲಾಧ್ಯಕ್ಷ ಎಂ.ಶೇಷಗಿರಿ ರಾವ್ ಅವರು ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ಜೂನ್ 10 ರಂದು ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಪೂರ್ಣಗೊಳ್ಳುವವರೆಗೆ ಕಟ್ಟಡದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರ, ಸಿಆರ್‌ಡಿಎ ಮತ್ತು ಎಂಟಿಎಂಸಿಗೆ ನ್ಯಾಯಾಲಯಕ್ಕೆ ಆದೇಶಿಸಬೇಕು ಎಂದು ಕೋರಿದ್ದರು ಎನ್ನಲಾಗಿದೆ.