T20 World Cup 2024: ಟಿ20 ವಿಶ್ವಕಪ್ ನಲ್ಲಿಯೇ ಐತಿಹಾಸಿಕ ದಾಖಲೆಯೊಂದನ್ನು ಮಿಚೆಲ್ ಸ್ಟಾರ್ಕ್ ಮಾಡಿದ್ದಾರೆ.
ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ (Mitchell Starc) ಬಾಂಗ್ಲಾದೇಶದ ವಿರುದ್ಧ ನಡೆದ ಪಂದ್ಯದ ವೇಳೆ 21 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಈ ವಿಕೆಟ್ ಮೂಲಕ ಐಸಿಸಿ ವಿಶ್ವಕಪ್ ಇತಿಹಾಸದಲ್ಲಿಯೇ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.
ಇದಕ್ಕೂ ಮುನ್ನ ದಾಖಲೆ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಟಿ20 ಹಾಗೂ ಏಕದಿನ ವಿಶ್ವಕಪ್ ಗಳಲ್ಲಿ 59 ಪಂದ್ಯಗಳನ್ನಾಡಿ 94 ವಿಕೆಟ್ ಕಬಳಿಸುವ ಮೂಲಕ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.
ಸದ್ಯ ಈ ದಾಖಲೆಯನ್ನು ಮುರಿಯುವಲ್ಲಿ ಆಸ್ಟ್ರೇಲಿಯಾದ ಎಡಗೈ ವೇಗಿ ಸ್ಟಾರ್ಕ್ ಯಶಸ್ವಿಯಾಗಿದ್ದಾರೆ. ಒಟ್ಟು 52 ಪಂದ್ಯಗಳನ್ನಾಡಿರುವ ಮಿಚೆಲ್ ಸ್ಟಾರ್ಕ್ ಒಟ್ಟು 95 ವಿಕೆಟ್ ಪಡೆದಿದ್ದಾರೆ. ಈ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆದಿದ್ದಾರೆ.