ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ(Sexual assault) ನಡೆಸಿರುವ ದೂರು ದಾಖಲಾಗಿದ್ದು, ಬಂಧಿಸಿರುವ ಪೊಲೀಸರು ರಾತ್ರಿಯಿಡೀ ವಿಚಾರಣೆ ನಡೆಸಿದ್ದಾರೆ.
ಶನಿವಾರ ರಾತ್ರಿ ವಶಕ್ಕೆ ಪಡೆದು ರಾತ್ರಿಯಿಡಿ ವಿಚಾರಣೆ ನಡೆಸಲಾಗಿದೆ. ಸಂತ್ರಸ್ತ(Victim) ಕೊಟ್ಟ ದೂರಿನ ಮೇಲೆ ಹೊಳೆನರಸೀಪುರದಲ್ಲಿ FIR ದಾಖಲಾಗಿದೆ. ಸೂರಜ್ ವಿರುದ್ಧ IPC ಸೆಕ್ಷನ್ 377,506,342,34ರ ಅಡಿ ದೂರು ದಾಖಲಿಸಿ ವಿಚಾರಣೆ ನಡೆಸಲಾಗಿದೆ. ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ.
ಪೊಲೀಸರು ಆರೋಪಿಯನ್ನು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿ ಠಾಣೆಗೆ ಕರೆತಂದಿದ್ದಾರೆ. ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಸೂರಜ್ ರೇವಣ್ಣಗೆ ಗ್ರಿಲ್ ಮಾಡಲಾಗಿದೆ. ಸಂತ್ರಸ್ತನ ದೂರಿನ ಅನ್ವಯ ಸೂರಜ್ ಗೆ ಪೊಲೀಸರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಈಗ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇನ್ನೊಂದೆಡೆ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿದೆ.