ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ವಿಪ ಸದಸ್ಯ ಸೂರಜ್ ರೇವಣ್ಣ (Suraj Revanna) ಅರೆಸ್ಟ್ ಆಗಿದ್ದಾರೆ.
ಸೂರಜ್ ರೇವಣ್ಣ ಪರ ವಕಾಲತ್ತು ವಹಿಸಲು 10 ಜನರ ವಕೀಲರ ತಂಡ ಸಿದ್ಧವಾಗಿದ್ದು, ಈಗಾಗಲೇ ತನಿಖಾಧಿಕಾರಿಯನ್ನು ಭೇಟಿ ಮಾಡಿ ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡಿದೆ ಎನ್ನಲಾಗಿದೆ.
ಸೂರಜ್ ರೇವಣ್ಣ ಪರ ವಕೀಲ ಪೂರ್ಣಚಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪ್ರಕರಣದ ಬಗ್ಗೆ ತನಿಖಾಧಿಕಾರಿ ಭೇಟಿ ಮಾಡಿ ಮಾಹಿತಿ ಪಡೆದಿದ್ದೇವೆ. ಠಾಣೆಗೆ ಬಂದಿದ್ದ ಸಂದರ್ಭದಲ್ಲಿ ಸೂರಜ್ ರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನಿಗೆ ಗೌರವ ಕೊಟ್ಟು ಪೊಲೀಸ್ ಠಾಣೆಗೆ ಅವರೇ ಬಂದಿದ್ದಾರೆ. ಬೆಂಗಳೂರಿಗೆ ಕರೆದೊಯ್ದ ಜನಪ್ರತಿನಿಧಿಗಳ ಕೋರ್ಟ್ ಜಡ್ಜ್ ಮುಂದೆ ಹಾಜರುಪಡಿಸಲಿದ್ದಾರೆ. ಕಸ್ಟಡಿಯಲ್ಲಿ ಇರುವುದರಿಂದ ಮಾತನಾಡಲು ಅವಕಾಶ ಸಿಕ್ಕಿಲ್ಲ. ಪ್ರಕರಣ ತನಿಖಾ ಹಂತದಲ್ಲಿ ಇದೆ. ಎಲ್ಲರೂ ಸೇರಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸೂರಜ್ ರೇವಣ್ಣ ಮೊಬೈಲ್ ಜಪ್ತಿ ಮಾಡಿ ಮೆಸೇಜ್, ವಾಟ್ಸಾಪ್ ಕರೆ, ಫೋನ್ ಕರೆ ಕುರಿತು ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣದ ತನಿಖೆ ಅಗ್ಯತ್ಯವಾಗಿದ್ದರಿಂದ ಸೂರಜ್ ರೇವಣ್ಣ ಅವರನ್ನು ತಮ್ಮ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಜಡ್ಜ್ ಮುಂದೆ ಮನವಿ ಮಾಡಲಿದ್ದಾರೆ.